Siddaramaiah: ಹಳ್ಳಿ ಊಟ ಸವಿದು, ಹಳೆಯ ನೆನಪಿಗೆ ಜಾರಿದ ಮಾಜಿ ಸಿಎಂ ಸಿದ್ದರಾಮಯ್ಯ
ಕಳೆದ ಎರಡು ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಮಲಪ್ರಭಾ ನದಿ ಪ್ರವಾಹಕ್ಕೊಳಗಾದ ಬಾದಾಮಿ ತಾಲೂಕಿನ ಬೇಲೂರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಸ್ತೆ ಬದಿಯ ಹೋಟೆಲ್ನಲ್ಲಿ ಸಿದ್ದರಾಮಯ್ಯ ಊಟ ಸವಿದರು. ಮತ್ತೊಂದು ಗ್ರಾಮಕ್ಕೆ ತೆರಳುವ ಸಂದರ್ಭ ಮಾರ್ಗ ಮಧ್ಯದಲ್ಲಿಯೇ ಒಂದು ಜಾಗದಲ್ಲಿ ಕುಳಿತು ಊಟ ಮಾಡಿದರು. ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಎಚ್ ವೈ ಮೇಟಿ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.
4/ 7


ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಎಸ್ ಆರ್ ಪಾಟೀಲ್, ಶಾಸಕ ಎಚ್ ವೈ ಮೇಟಿ ಸಾಥ್ ನೀಡಿದರು
Loading...