Temple Run ನಡೆಸಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ
ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarapa) ಅವರು ಇಂದು ಟೆಂಪಲ್ ರನ್ (Temple Run) ನಡೆಸಿದ್ದಾರೆ. ಬೆಳಗ್ಗೆ ಗೋಕರ್ಣಕ್ಕೆ ಭೇಟಿ ನೀಡಿದ್ದ ಅವರು ಮಧ್ಯಾಹ್ನ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಎಸ್ ಈಶ್ವರಪ್ಪ ಇಂದು ಟೆಂಪಲ್ ರನ್ ನಡೆಸಿದ್ದಾರೆ. ಇಂದು ಮುಂಜಾನೆ ಗೋಕರ್ಣಕ್ಕೆ ಭೇಟಿ ನೀಡಿ ಮಹಾಬಲೇಶ್ವರ ದೇಗುಲದ ಆತ್ಮಲಿಂಗಕ್ಕೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದರು.
2/ 7
ಇನ್ನು ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಗುಲ ಭೇಟಿ ಕಾರ್ಯಕ್ರಮ ವೈಯಕ್ತಿಕವಾಗಿದ್ದು, ಈ ವೇಳೆ ಯಾವುದೇ ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದರು
3/ 7
ಇದಾದ ಬಳಿಕ ಗೋಕರ್ಣದಿಂದ ಅವರು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದರು. ಮೂಕಾಂಬಿಕೆ ಸನ್ನಿಧಿಯಲ್ಲಿ ಪೂಜೆ ನಡೆಸಿದರು.
4/ 7
ಈ ವೇಳೆ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗಿಯಾಗಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
5/ 7
ಕೊಲ್ಲೂರು ಮೂಕಾಂಬಿಕೆ ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು. ಅಲ್ಲಿ ಕೂಡ ಅವರು ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
6/ 7
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ವಿಪಕ್ಷಗಳ ಪ್ರತಿಭಟನೆಗೆ ಮಣಿದು ಅವರು ತಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
7/ 7
ಕಮಿಷನ್ ಆರೋಪ ಸಂಬಂಧ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಇನ್ನು ಪ್ರತಿಭಟನೆಗಳು ನಡೆಯುತ್ತಲೇ ಇದೆ. ಸದ್ಯ ಸಂತೋಷ್ ಪಾಟೀಲ್ ಪ್ರಕರಣದ ತನಿಖೆಗೆ ಸರ್ಕಾರ ಮುಂದಾಗಿದೆ.
First published:
17