ಸಭಾ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿಗಳ ನೂತನ ಅಭಿದಾನ ಘೋಷಣೆ ಮಾಡಲಾಗಿದ್ದು, ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಶಿವಸಿದ್ದೇಶ್ವರವ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್), ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಸದಾಶಿವ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಗೌರಿಶ್ ಕುಮಾರ್) ಎಂದು ವಿವಿಧ ಮಠಾಧ್ಯಕ್ಷರು ಹಾಗೂ ಮಠದ ಪ್ರಮುಖರ ಸಮ್ಮುಖದಲ್ಲಿ ಘೋಷಣೆ ಮಾಡಲಾಗಿದೆ.
ಬಸವ ಜಯಂತಿಯಂದು ತುಮಕೂರಿನ ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಸರಳವಾಗಿ ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧಾರ ಮಾಡಿತ್ತು, ಇದರಂತೆ ಸರಳವಾಗಿ ಕಾರ್ಯಕ್ರಮ ನಡೆಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಿದ್ಧಲಿಂಗಸ್ವಾಮೀಜಿಗಳು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶಯದಂತೆ ಶ್ರೀಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದ್ದು, ಭಕ್ತರು ಹಾಗೂ ಮಠದ ಹಿತೈಶಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.