ಸಾವಿರಾರು ಪ್ರಯಾಣಿಕರು ದಿನ ನಿತ್ಯ ಓಡಾಡುವ ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಾಕ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಸ್ಥಳದಲ್ಲಿದ್ದ ಪ್ರಯಾಣಿಕರನ್ನ ಬೇರೆಡೆಗೆ ಸ್ಥಳಾಂತರ ಮಾಡಲಾಗ್ತಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಟರ್ಮಿನಲ್ 1ರಲ್ಲಿ ಭಾರಿ ಅನಾಹುತ ತಪ್ಪಿದೆ. ಸಿಬ್ಬಂದಿ ಎಚ್ಚೆತ್ತು ಎಲ್ಲರನ್ನು ಹೊರಗೆ ಕಳುಹಿಸಿದ್ದಾರೆ. ಶಾಕ್ ಸರ್ಕ್ಯೂಟ್ ನಿಂದ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಂಡ ತಕ್ಷಣ ಸ್ಥಳದಲ್ಲಿದ್ದ ಪ್ರಯಾಣಿಕರು, ಅಂಗಡಿ ವ್ಯಾಪಾರಸ್ಥರನ್ನ ಸಿಬ್ಬಂದಿ ಬೇರೆಡೆಗೆ ಕಳುಹಿಸಿದ್ದಾರೆ. ತಕ್ಷಣ ಸಾರಿಗೆ ಸಿಬ್ಬಂದಿಯಿಂದಲೇ ಗ್ಯಾಸ್ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಸಲಾಗ್ತಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸೋ ಕೆಲಸ ಮಾಡಿದ್ದಾರೆ. ಅದೃಷ್ಠವಶಾತ್ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.