ವಿಜಯಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬಸವನ ಬಾಗೇವಾಡಿ ಕ್ರಾಸ್ ಬಳಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ ಅಂಗಡಿಯಲ್ಲಿಯೇ ಇಬ್ಬರು ಕಾರ್ಮಿಕರು ಮಲಗಿದ್ದರು.
2/ 5
ಅಶೋಕ ದೇಸ್ನೂಯಿ (25) ಮತ್ತು ಲಿಂಬಾರಾಮ ದೇಸ್ನೂಯಿ(35) ಬೆಂಕಿ ಅವಘಡದಲ್ಲಿ ಮೃತ ಕಾರ್ಮಿಕರು. ಬಾಗೇವಾಡಿ ಕ್ರಾಸ್ ಬಳಿ ಹೆದ್ದಾರಿಯ ಬದಿಯಲ್ಲಿಯೇ ಹಲವು ಪ್ಲಾಸ್ಟಿಕ್ ಸಾಮಾಗ್ರಿಗಳ ಅಂಗಡಿಗಳಿವೆ.
3/ 5
ತಡರಾತ್ರಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಾಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
4/ 5
ಬೆಂಕಿಯ ಕೆನ್ನಾಲಿಗೆಗೆ ಎರಡು ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಏಳು ಅಂಗಡಿಗಳನ್ನು ರಕ್ಷಣೆ ಮಾಡಲಾಗಿದೆ.
5/ 5
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)