Photos: ಜೀವಪಣಕ್ಕಿಟ್ಟು ನೆರೆ ಸಂತ್ರಸ್ತರ ರಕ್ಷಣೆಗೆ ಮುಂದಾದ ಅಗ್ನಿಶಾಮಕದಳ ಸಿಬ್ಬಂದಿ
ಬೆಳಗಾವಿಯ ಕಾಗವಾಡ ತಾಲೂಕಿನ 27 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ನೀರಿನ ಮಧ್ಯೆ ರಕ್ಷಣೆಗಾಗಿ ಎದುರು ನೋಡುತ್ತಿರುವ ವಯೋವೃದ್ಧರು, ರೋಗಿಗಳ ಸ್ಥಿತಿ ಶೋಚನೀಯವಾಗಿದೆ, ಅಗ್ನಿಶಾಮಕದಳದ ಸಿಬ್ಬಂದಿ ಅವರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದು, ನೀರಿನ ಮಧ್ಯೆ ಸಿಲುಕಿದ 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.