ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
2/ 8
ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
3/ 8
ಪೊಲೀಸ್ ಸಿಬ್ಬಂದಿಗಳಾದ ಮಹೇಶ್, ಮಂಜುನಾಥ್, ಆನಂದ್ ಹರೀಶ್ ಎಂಬವರಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ.
4/ 8
ಸ್ಥಳಕ್ಕೆ ಅಮೃತ್ತೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5/ 8
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮತ್ತು ಮೊಹಮ್ಮದ್ ಫಾಜಿಲ್ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದರು.
6/ 8
ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿ ಐದು ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದರು
7/ 8
ತೀವ್ರ ಶೋಕದಲ್ಲಿರುವ ಕುಟುಂಬದವರು ಈ ನೋವಿನಿಂದ ಹೊರಬರಬೇಕು. ಪಕ್ಷದ ವತಿಯಿಂದ ಆ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದರು.
8/ 8
ಕಂಗೊಳಿಸುತ್ತಿದ್ದ ಕರಾವಳಿಯಲ್ಲಿ ಬಡ ಕುಟುಂಬಗಳ ಯುವಕರನ್ನು ರಾಜಕೀಯ ದುರ್ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳೂ ಕ್ರಿಯಾಶೀಲ ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.