BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

BMTC: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 8ರ ಮಹಿಳಾ ದಿನಾಚರಣೆ ಹಿನ್ನೆಲೆ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

First published:

  • 17

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಮಾರ್ಚ್ 8 ರಂದು ಮಹಿಳೆಯರು ಬಿಎಂಟಿಸಿ ಬಸ್​​​ನಲ್ಲಿ ಎಲ್ಲಿಗೆ ಪ್ರಯಾಣಿಸಿದರೂ ಹಣ ನೀಡುವ ಅಗತ್ಯವಿಲ್ಲ. ಮಹಿಳಾ ಪ್ರಯಾಣಿಕರನ್ನು ಉತ್ತೇಜಿಸುವ ಉದ್ದೇಶದಿಂದ ಬಿಎಂಟಿಸಿ ಈ ಪ್ಲಾನ್ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಬೆಂಗಳೂರಿನಲ್ಲಿ 40,86,580 ಮಹಿಳೆಯರಿದ್ದು,  ಪ್ರತಿದಿನ 10,21,645 ಜನರು ಪ್ರಯಾಣ ಮಾಡುತ್ತಾರೆ. ಮಾರ್ಚ್ 8ರಂದು ಉಚಿತ ಪ್ರಯಾಣ ಹಿನ್ನೆಲೆ ಈ ಸಂಖ್ಯೆ ದುಪ್ಪಟ್ಟು ಆಗಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

      ಬಿಎಂಟಿಸಿಗೆ 8 ಕೋಟಿಗೂ ಅಧಿಕ ಹೊರೆ 

    ಮಾರ್ಚ್ 8ರಂದು 20,43,290 ಮಹಿಳೆಯರು ಸಾರಿಗೆ ಬಸ್​ನಲ್ಲಿ ಪ್ರಯಾಣಿಸಲಿದ್ದಾರೆ ಎಂದು ಬಿಎಂಟಿಸಿ ಅಂದಾಜಿಸಿದೆ. ಈ ಉಚಿತ ಪ್ರಯಾಣದಿಂದಬ ಬಿಎಂಟಿಸಿಗೆ 8,17,31,600 ರೂಪಾಯಿ ಹೊರೆ ಆಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಉಚಿತ ಪ್ರಯಾಣದ ಉದ್ದೇಶ ಏನು? 

    ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣ ನೀಡುವದರಿಂದ ಸರ್ಕಾರದ ಘನತೆ ಹೆಚ್ಚಾಗುತ್ತದೆ. ಸಾರ್ವಜನಿಕ ಸಾರಿಗೆ ಉತ್ತೇಜಿಸಿದಂತಾಗುತ್ತದೆ. ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಪಿಯು ವಿದ್ಯಾರ್ಥಿಗಳಿಗೂ ಗುಡ್ ನ್ಯೂಸ್​​ 

    ಮಾರ್ಚ್ 9, 2023 ರಿಂದ ಮಾರ್ಚ್ 29, 2023ರವರೆಗೆ ದ್ವಿತೀಯ ಪಿಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಪ್ರಯಾಣದ ವೇಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕು. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    BMTC: ಮಹಿಳೆಯರು, ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

    ಪರೀಕ್ಷಾವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮನವಿ ಮಾಡಿಕೊಂಡಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES