ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ಹೆಚ್ಚುವರಿ ನೀರನ್ನು ಡ್ಯಾಂ ಮೂಲಕ ನದಿಗೆ ಹರಿಯ ಬಿಡಲಾಗುತ್ತಿದೆ. ಈಗಾಗಲೇ ಜಲಾಶಯದಿಂದ ಸುಮಾರು 80 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಹರಿ ಬಿಡಲಾಗಿದೆ. ಇದರಿಂದಾಗಿ ಬರಡಾಗಿದ್ದ ಕಾವೇರಿ ನದಿಯ ಗಗನಚುಕ್ಕಿ ಜಲಪಾತಕ್ಕೆ ಇದೀಗ ಕಾವೇರಿ ನದಿ ಪ್ರವಾಹ ಹೊಸ ಜೀವಕಳೆ ತಂದುಕೊಟ್ಟಿದೆ.