ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಆದ ಪರಿಣಾಮ 17 ಜನರಿಗೆ ಗಾಯವಾಗಿದೆ. ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದೆ.
2/ 7
ಯುಕೆಪಿ ಕ್ಯಾಂಪ್ ನ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಸಾಹೇಬ ಗೌಡ ಅವರ ಸೊಸೆಯ ಸೀಮಂತ ಕಾರ್ಯಕ್ರಮ ನಡೆಸಲಾಗುತಿತ್ತು.ಈ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿದೆ.
3/ 7
ಲಿಂಡರ್ ಬ್ಲಾಸ್ಟ್ ನಿಂದ ಟೆಂಟ್, ಬೈಕ್ ಹಾಗೂ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. 12 ಮಕ್ಕಳು ಸೇರಿ 17 ಜನರಿಗೆ ಗಾಯವಾಗಿದೆ. ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
4/ 7
ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಿಲಿಂಡರ್ ಪೂರೈಕೆ ಮಾಡಿದ ಎಜೆನ್ಸಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.
5/ 7
ಘಟನಾ ಸ್ಥಳಕ್ಕೆ ಭೇಟಿ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್.ರಾಗಾಪ್ರಿಯಾ, ದೋರನಹಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
6/ 7
ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಗೆ ಸೂಚಿಸಲಾಗಿದೆ. ಈ ಘಟನೆ ಕುರಿತು ಫುಡ್ ಅಧಿಕಾರಿಗೆ ವರದಿ ಕೇಳಿದ್ದೇನೆ ಎಂದರು.
7/ 7
8 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಲ್ಲಿ 12 ಮಕ್ಕಳಿರುವುದು ಇಡೀ ಗ್ರಾಮದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ.