ದಾಖಲೆ ಇಲ್ಲದೇ ಹಣ ಸಾಗಾಟ ಮಾಡುತ್ತಿದ್ದ 34 ಲಕ್ಷ ರೂಪಾಯಿ ಹಣವನ್ನು ಯಾದಗಿರಿ ನಗರದ ಹೊರವಲಯದ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ. ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ ಯಾವುದೇ ದಾಖಲೆಯಿಲ್ಲದೆ ಹಣ ಸಾಗಾಟ ಮಾಡುತ್ತಿರುವ ಹಿನ್ನಲೆ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಗದಗ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿದ್ದ ಮನೆಯ ಮೇಲೆ ದಾಳಿ ಮಾಡಿ 34 ಸಾವಿರ ಮೌಲ್ಯದ 80.73 ಲೀಟರ್ ಮದ್ಯ, ಒಂದು ಸಾವಿರ ಮೌಲ್ಯದ ಬಿಯರ್ ಜಪ್ತಿ ಮಾಡಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟಾರಾಯಣಕೇರಿ ತಾಂಡಾದಲ್ಲಿ ಘಟನೆ ನಡೆದಿದ್ದು, ತಾಂಡಾದ ಭೀಮಪ್ಪ ಚವ್ಹಾಣ್ ಎಂಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ನ್ಯೂಸ್18 ಕನ್ನಡಕ್ಕೆ ಅಬಕಾರಿ ಡಿಸಿ ಭರತೇಶ್ ಮಾಹಿತಿ ನೀಡಿದ್ದಾರೆ.