ಬೆಳಗಾವಿ: "ಮನಸ್ಸಿದ್ದರೆ ಮಾರ್ಗ" ಎಂಬ ಮಾತನ್ನು ನೀವು ಕೇಳಿರುತ್ತೀರಿ. ಯಾವುದೇ ಗುರಿಯನ್ನು ಮುಟ್ಟಲು ಬಲವಾದ ಬಯಕೆ ಇದ್ದರಷ್ಟೇ ಸಾಲದು ಅದನ್ನು ಸಾಧಿಸಲು ಎದುರಾಗುವ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾಗುತ್ತದೆ. ಹೌದು, ರಾಜ್ಯದಲ್ಲಿ ಮುಂದಿನ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿರುವ ನಾಯಕರಿಗೆ ಈ ಮಾತುಗಳು ಬಹಳ ಹೊಂದಾಣಿಕೆ ಆಗ್ತಿದೆ ಎಂದು ಕಾಣುತ್ತಿದೆ. (ಸಾಂದರ್ಭಿಕ ಚಿತ್ರ)
ಮುಂದಿನ ವಿಧಾನಸಭಾ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಜ್ಜಾಗಿದ್ದು, ಚುನಾವಣೆಯಲ್ಲಿ ನೇರಾನೇರ ಹಣಾಹಣಿ ಕಾಣುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಕಮಲ ಅರಳಿಸಲೇಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಣತೊಟ್ಟು ಓಡಾಟ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷದಿಂದ ನಾಗೇಶ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತು ಪಡಿಸಿದರೆ ಸಂಜಯ್ ಪಾಟೀಲ್ ಹಾಗೂ ಧನಂಜಯ್ ಜಾಧವ್ ಅವರು ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ.
ಇತ್ತ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಾಸಕಿ, ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತೊಮ್ಮೆ ಗೆಲುವು ಪಡೆಯಲು ಬಿರುಸಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಆದರೆ ಕಳೆದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಕಾಂಗ್ರೆಸ್ನಲ್ಲಿದ್ದ ಕಾರಣ ಅವರ ಬೆಂಬಲಿಗರು ಕೂಡ ಹೆಬ್ಬಾಳ್ಕರ್ ಅವರಿಗೆ ಬೆಂಬಲ ಸೂಚಿಸಿದ್ದರು. ಈ ಬಾರಿ ಜಾರಕಿಹೊಳಿ ಅವರು ಬಿಜೆಪಿಯಲ್ಲಿರುವುದು ಅವರಿಗೆ ಮೈನಸ್ ಅಂಶವಾಗಿದೆ.