ಆದೇಶ ಪ್ರತಿಯಲ್ಲಿ ರಾಜ್ಯದ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ ಎಂದು ಉಲ್ಲೇಖಿಸಲಾಗಿದೆ.