Hubballi Dargah: ಪೊಲೀಸ್ ಸರ್ಪಗಾವಲಿನಲ್ಲಿ ಹುಬ್ಬಳ್ಳಿ ದರ್ಗಾ ತೆರವು ಕಾರ್ಯಾಚರಣೆ
Hazrath Sayed Mahmood Shah Quadri: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ದರ್ಗಾ ಸುತ್ತಲೂ ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.
ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರೋ ಹಜರತ್ ಸೈಯದ್ ಮಹಮೂದ್ ಖಾದ್ರಿ ದರ್ಗಾ ತೆರವುಗೊಳಿಸಲಾಗುತ್ತಿದೆ. ಹುಬ್ಬಳ್ಳಿ - ಧಾರವಾಡ ಸಂಪರ್ಕ ಕಲ್ಪಿಸೋ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದೆ.
2/ 7
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ನಿಂದ ಬಿಗಿಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪೊಲೀಸ್ ಸರ್ಪಗಾವಲಿನಲ್ಲಿ ದರ್ಗಾ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.
3/ 7
ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಪೊಲೀಸರು, ದರ್ಗಾ ತೆರವಿನ ದೃಶ್ಯ ಸೆರೆ ಹಿಡಿಯದಂತೆ ಮಾಧ್ಯಮಗಳನ್ನೂ ದೂರವಿಟ್ಟಿದ್ದಾರೆ.
4/ 7
ದರ್ಗಾ ಸುತ್ತ ತಗಡು ಜೋಡಿಸಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ಡಿಸಿಪಿ ಸಾಹಿಲ್ ಬಾಗ್ಲಾ ಮತ್ತು ಬ್ಯಾಕೋಡ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
5/ 7
ಭದ್ರತೆಗೆ ವಿಶೇಷ ಪಡೆ ನಿಯೋಜನೆ ಮಾಡಲಾಗಿದೆ. ದರ್ಗಾ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಎಲ್ಲಾ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
6/ 7
ಈ ಹಿಂದೆ ದರ್ಗಾ ತೆರವುಗೊಳಿಸಲು ಪಾಲಿಕೆ ಸಹ ನೋಟಿಸ್ ನೀಡಿತ್ತು. ರಾತ್ರಿಯೇ ಪೊಲೀಸರನ್ನ ದರ್ಗಾ ವ್ಯಾಪ್ತಿಯಲ್ಲಿ ನಿಯೋಜನೆಗೊಳಿಸಲಾಗಿದೆ.
7/ 7
ಮತ್ತೊಂದು ಕಡೆ ದರ್ಗಾ ಆಡಳಿತ ಮಂಡಳಿ ಸದಸ್ಯರು ತುರ್ತ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸಂಪರ್ಕಿಸಲು ದರ್ಗಾ ಆಡಳಿತ ಮಂಡಳಿ ಪ್ರಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ.