ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮಾಂಡೌಸ್ ಚಂಡಮಾರುತದ ಪರಿಣಾಮದಿಂದ ಪಕ್ಕದ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.
2/ 8
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಶೀತಗಾಳಿ ಬೀಸುತ್ತಿದ್ದು, ಜೊತೆಗೆ ತುಂತುರು ಮಳೆಯಾಗುತ್ತಿದೆ.
3/ 8
ಇದರ ಮಧ್ಯೆ ಇನ್ನೂ 5 ದಿನ ಮಳೆ ಇರಲಿದ್ದು, ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ಮಾಹಿತಿ ನೀಡಿದ್ದಾರೆ.
4/ 8
ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಾಲಾಗಿದೆ.
5/ 8
ಸದ್ಯ ರಾಜ್ಯ ರಾಜಧಾನಿ ಫುಲ್ ಕೂಲ್ ಆಗಿದ್ದು, ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಹಾಗೂ ಶೀತ ವಾತಾವರಣ ಇರಲಿದೆ.
6/ 8
ಕರಾವಳಿಯ ಬಹುತೇಕ ಕಡೆ ಇಂದು ಮಳೆಯಾಗಿದ್ದು, ನಾಳೆಯೂ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಬೆಂಗಳೂರಿನಲ್ಲಿ ಮೊಡಕವಿದ ವಾತಾವರಣ ಮುಂದುವರೆದಿದೆ.
7/ 8
ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದೆ. ಇಲ್ಲಿ ಗುಡುಗು ಸಹಿತ ಸುಮಾರು 11 ಸೆಂಟಿ ಮೀಟರ್ ನಷ್ಟು ಮಳೆ ದಾಖಲಾಗಬಹುದು ಎಂದು ರಾಜ್ಯ ಹವಾಮಾನ ಕೇಂದ್ರದ ವರದಿ ತಿಳಿಸಿದೆ.
8/ 8
ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.