ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮಾಂಡೌಸ್ ಚಂಡಮಾರುತದ ಪರಿಣಾಮದಿಂದ ಪಕ್ಕದ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.
2/ 8
ಬೆಂಗಳೂರಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 14ರವರೆಗೆ ಹಳದಿ ಅಲರ್ಟ್ ಘೋಷಿಸಿದೆ.
3/ 8
ಬೆಂಗಳೂರಿನಲ್ಲಿ ಸದ್ಯ ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಡಿಸೆಂಬರ್ 14ರವರೆಗೆ ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ.
4/ 8
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
5/ 8
ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತು ಚುರುಕಾಗಲಿದ್ದು, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ.
6/ 8
ಇದೇ ವೇಳೆ ಕರಾವಳಿ ಭಾಗದ ಮೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜೋರು ಮಳೆ ದಾಖಲಾಗಿದೆ.
7/ 8
ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದೆ. ಇಲ್ಲಿ ಗುಡುಗು ಸಹಿತ ಸುಮಾರು 11 ಸೆಂಟಿ ಮೀಟರ್ ನಷ್ಟು ಮಳೆ ದಾಖಲಾಗಬಹುದು ಎಂದು ರಾಜ್ಯ ಹವಾಮಾನ ಕೇಂದ್ರದ ವರದಿ ತಿಳಿಸಿದೆ.
8/ 8
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆ ಆಗಲಿದೆ. ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.