ಮಧ್ಯಾಹ್ನ 1 ಗಂಟೆಗೆ ಆರಂಭವಾದ ಮಳೆ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸುರಿದಿದೆ. ದಿಢೀರ್ ಜೋರು ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
2/ 7
ಬೆಂಗಳೂರಿನ ವಿಧಾನಸೌಧ, ಮೆಜೆಸ್ಟಿಕ್, ಕಾರ್ಪೋರೇಷನ್, ಕೆಆರ್ ಮಾರುಕಟ್ಟೆ, ಶಾಂತಿನಗರ ಸುತ್ತಮುತ್ತ ಮಳೆಯಾಗಿದೆ. ಮಳೆಯ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಕಾರಣ ಸವಾರರು ನಿಧಾನಕ್ಕೆ ಚಲಿಸವಂತಾಯ್ತು.
3/ 7
ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಿಸಿಲಿನಿಂದ ಬಳಲಿದ್ದ ಬೆಂಗಳೂರು ಕೂಲ್ ಕೂಲ್ ಆಗಿದೆ.
4/ 7
ಮೋದಿ ರೋಡ್ಶೋಗೆ ಮಳೆ ಆತಂಕ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಗಾ ರೋಡ್ಶೋ ಮಾಡಲಿದ್ದಾರೆ. ರಾಜಧಾನಿಯಲ್ಲಿ ಮಳೆಯಾಗುತ್ತಿರುವ ಕಾರಣ ರೋಡ್ಶೋಗೆ ಅಡ್ಡಿಯುಂಟಾಗುವ ಸಾಧ್ಯತೆಗಳಿವೆ.
5/ 7
ಪ್ರಧಾನಿ ಮೋದಿ ರೋಡ್ ಶೋ ವೇಳೆ ಸಾರ್ವಜನಿಕರು ಮತ್ತು ಕಾರ್ಯಕರ್ತರು ರಸ್ತೆಗೆ ಬರದಂತೆ ಮುಂಜಾಗ್ರತೆ ಕ್ರಮವಾಗಿ ಸುಮನಹಳ್ಳಿ ಜಂಕ್ಷನ್ ಬ್ರಿಡ್ಜ್ ಕೆಳಗೆ ಬ್ಯಾರಿಕೇಡ್ ಹಾಕಲಾಗಿದೆ. ಜಂಕ್ಷನ್ ನ ಅಂಡರ್ ಪಾಸ್ ಬಳಿ ಸಾರ್ವಜನಿಕರು ರೋಡ್ ಶೋ ನೋಡಲು ಅವಕಾಶ ಕಲ್ಪಿಸಲಾಗಿದೆ.
6/ 7
ಸಂಜೆ 6.15ಕ್ಕೆ ಮಾಗಡಿ ರೋಡ್ ನೈಸ್ ಜಂಕ್ಷನ್ ನಿಂದ ರೋಡ್ಶೋ ಆರಂಭವಾಗಿ ಸಂಜೆ 7 ಗಂಟೆಗೆ ಸುಮ್ಮನಹಳ್ಳಿ ಸರ್ಕಲ್ನಲ್ಲಿ ಮುಕ್ತಾಯವಾಗಲಿದೆ.
7/ 7
ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಬಾಗಲಕೋಟೆ, ಗದಗ, ಕೊಪ್ಪಳ ಸುತ್ತಮುತ್ತ ಗುಡುಗು-ಮಿಂಚು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕೆಲವು ಕಡೆ ಆಲಿಕಲ್ಲು ಮಳೆಯಾಗಿದೆ.