ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕುಮಾರಧಾರ ನದಿ ಮೈದುಂಬಿ ಹರಿಯುತ್ತಿದೆ. ಈ ನದಿ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.ಕರ್ನಾಟಕದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿದೆ. ಕುಕ್ಕೆ ಸುಬ್ರಮಣ್ಯದ ಸ್ನಾನಘಟ್ಟ ಕಂಡಿದ್ದು ಹೀಗೆ.