Weather Report: ರಾಜ್ಯಾದ್ಯಂತ ಭಾರೀ ಮಳೆ; ಇಂದು ಕೂಡ ಶಾಲಾ- ಕಾಲೇಜುಗಳಿಗೆ ರಜೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಪ್ರವಾಹ

Rain Updates: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ದಾಳಿಗೆ ಜನರು ತತ್ತರಿಸಿದ್ದಾರೆ. ಮಲೆನಾರು ಭಾಗದಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು, ದಕ್ಷಿಣಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ನೇತ್ರಾವತಿ, ಶರಾವತಿ ನದಿಗಳ ನೀರಿನ ಪ್ರಮಾಣವೂ ಹೆಚ್ಚುತ್ತಲೇ ಇದೆ. ಕರ್ನಾಟಕ- ಗೋವಾ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್​ನಲ್ಲಿ ಮಣ್ಣು ಕುಸಿದಿರುವ ಕಾರಣ ಚಿಕ್ಕಮಗಳೂರು- ದಕ್ಷಿಣ ಕನ್ನಡ ಸಂಚಾರ ಸಂಪೂರ್ಣ ಬಂದ್ ಆಗಿದೆ.

  • News18
  • |
First published: