Rain Update: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ; 4 ದಿನ ಹಲವೆಡೆ ಭಾರೀ ಮಳೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ಭಾರೀ ಮಳೆಯಾಗ್ತಿದೆ (Heavy Rain). ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಮುಂದಿನ 4 ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
2/ 8
ಇಂದಿನಿಂದ ಜುಲೈ 5ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
3/ 8
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಮುಂಗಾರು ಚುರುಕುಗೊಳ್ಳುತ್ತಿದ್ದು, ಹಲವೆಡೆಯ ಮಳೆಯ ಅಬ್ಬರ ಜೋರಾಗಿದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
4/ 8
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರದಿಂದ ಮೋಡ ಕವಿದ ವಾತವಾರಣವಿದ್ದು, ತುಂತುರು ಮಳೆಯಾಗುತ್ತಿದೆ. ಮಳೆಯ ಜೊತೆಯಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ಚಳಿ ಪ್ರಮಾಣ ಏರಿಕೆಯಾಗಿದೆ.
5/ 8
ಮಂಗಳೂರಿನಲ್ಲೂ ಭಾರೀ ಮಳೆಯಾಗ್ತಿದ್ದು, ಸುರಿಯುತ್ತಿರೋ ಭಾರಿ ಮಳೆಗೆ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
6/ 8
ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಡಲತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮಲ್ಪೆಯಲ್ಲಿ ಬಲೆ ಹಾಕಲಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಕರಾವಳಿ ಜಿಲ್ಲೆಗಳ ಕೆಲವೆಡೆ ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಜುಲೈ 28, 29 ರಂದು ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ. (ಸಾಂದರ್ಭಿಕ ಚಿತ್ರ)
8/ 8
ಮಡಿಕೇರಿಯಲ್ಲಿಯೂ ಮಳೆ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.