ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
2/ 11
ಚಿಕ್ಕಮಗಳೂರು, ಮಡಿಕೇರಿ, ಕೊಡಗು, ಚಾರ್ಮಾಡಿ ಘಾಟ್, ಶೃಂಗೇರಿ, ಕುದುರೆಮುಖ ಇನ್ನೂ ಮೊದಲಾದ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
3/ 11
ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನಜೀವನ ಅಸ್ತವ್ಯಸ್ತವಾಗಿದೆ.
4/ 11
ಧಾರಾಕಾರ ಮಳೆ ಹಿನ್ನೆಲೆ ನದಿಗಳ ಹರಿವಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
5/ 11
ದಟ್ಟ ಕಾನನ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮೂಡಿಗೆರೆಯಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಹದಗೆಟ್ಟಿದೆ.
6/ 11
ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಹುಕ್ಕೇರಿ ಹಳ್ಳದ ನೀರು ಗದ್ದೆ ಮೇಲೆ ಹರಿಯುತ್ತಿದ್ದು, ಕಾಫಿತೋಟದಲ್ಲಿ ಅಡಿ ಎತ್ತರಕ್ಕೆ ನೀರು ನಿಂತಿದೆ.
7/ 11
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಮೂಲರಹಳ್ಳಿ ಬಳಿ ಗುಡ್ಡ ಕುಸಿತವಾಗಿದೆ.
8/ 11
ಹೆಬ್ಬಾಳೆ ಸೇತುವೆಯೂ ಮೈದುಂಬಿ ಹರಿಯುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾದರೆ, ಸೇತುವೆ ಮುಳುಗುವ ಸಾಧ್ಯತೆ ಇದೆ ಎನ್ನಲಾಗಿದೆ.
9/ 11
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಬ್ರಹ್ಮಗಿರಿ ಬೆಟ್ಟ ಶ್ರೇಣಿಯಲ್ಲಿಯೂ ವರುಣನ ಆರ್ಭಟ ಶುರುವಾಗಿದೆ. ಹೀಗಾಗಿ ಕಾವೇತಿ ಕನ್ನಿಕೆ ಸುಜೋತಿ ಮೈದುಂಬಿ ಹರಿಯುತ್ತಿದೆ.
10/ 11
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಮಳೆ ಇದೇ ರೀತಿಯಾಗಿ ಮುಂದುವರೆದರೆ ಎರಡು ದಿನಗಳಲ್ಲಿ ಸಂಗಮ ಭರ್ತಿಯಾಗುವ ಸಾಧ್ಯತೆ ಇದೆ.
11/ 11
ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ.