Heavy Rain: ಬೆಂಗಳೂರಲ್ಲಿ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು; ಮನೆಗಳಿಗೆ ನುಗ್ಗಿದ ನೀರು
Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಅ.15) ಸುರಿದ ಭಾರೀ ಮಳೆ ಅವಾಂತರ ಸೃಷ್ಟಿ ಮಾಡಿದೆ. ಸಂಜೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.
ಸಂಜೆ ಸುರಿದ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುವವರು ಮಳೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.
2/ 8
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆಗಳು ಕೆರೆಯಂತಾಗಿದೆ. ನಿತ್ಯ ಮಳೆ ಸುರಿಯುತ್ತಿದ್ದು, ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡಿದೆ. ರಸ್ತೆ ಯಾವುದು, ಗುಂಡಿ ಯಾವುದು ಅನ್ನೋದು ತಿಳಿಯದಂತಾಗಿದೆ.
3/ 8
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ.
4/ 8
ಶಾಂತಿನಗರದ ಜೋಡಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಝರಿಯಂತೆ ಹರಿಯುತ್ತಿರುವ ನೀರಿನಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.
5/ 8
ಕೆ.ಆರ್ ಮಾರ್ಕೆಟ್ ಬಳಿ ಅಧಿಕ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.
6/ 8
ವಿಧಾನಸೌಧದ ಎದುರಿರೋ ರಸ್ತೆ ಮಳೆ ನೀರಿನಿಂದ ಜಲಾವೃತಗೊಂಡಿದೆ. ಮಳೆಯ ನೀರಿನಿಂದ ವಾಹನ ಸವಾರರ ಪರದಾಡುವಂತಾಯ್ತು.
7/ 8
ಗಾಡಿ, ಆಟೋ, ಬೈಕ್ ಗಳು ಮಳೆಯ ನೀರಿನಿಂದ ಆಫ್ ಆಗಿ ರಸ್ತೆಯಲ್ಲೇ ಕೆಟ್ಟು ನಿಂತಿದ್ದವು. ವಾಹನ ಸವಾರರು ಬೈಕ್ ಗಳನ್ನು ತಳ್ಳಿಕೊಂಡು ಹೋಗಿದ್ದಾರೆ.
8/ 8
ನಗರದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
First published:
18