Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Election And Rain: ರಾಜ್ಯದಲ್ಲಿ ಎಲೆಕ್ಷನ್ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ.. ಆದ್ರೆ ಚುಣಾವಣಾ ಪ್ರಚಾರಕ್ಕೆ ಮಳೆ ಅಡ್ಡಿಯಾಗುವ ಸಾಧ್ಯೆತೆಗಳಿವೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಕಳೆದೆರಡು ದಿನದಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಬಿಸಿಲು ಹೆಚ್ಚಾಗಿರುವ ಕಾರಣ ರಾಜಕೀಯ ನಾಯಕರು ಸಂಜೆಯ ನಂತರ ರೋಡ್ಶೋ ನಡೆಸುತ್ತಿದ್ದಾರೆ.
2/ 8
ಆದ್ರೆ ಕಳೆದ ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
3/ 8
ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, ಬಹಿರಂಗ ಪ್ರಚಾರಕ್ಕೆ ಏಳೇ ದಿನ ಬಾಕಿ ಉಳಿದಿದೆ. ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳಿಗೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ.
4/ 8
ದಕ್ಷಿಣ ಒಳನಾಡಿನ 15 ಜಿಲ್ಲೆ, ಉತ್ತರ ಒಳನಾಡಿನ 8 ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಟ್ಟು 23 ಜಿಲ್ಲೆಗಳಲ್ಲಿ ಮಳೆರಾಯನ ಅಲರ್ಟ್ ನೀಡಲಾಗಿದೆ.
5/ 8
ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಂ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
6/ 8
ಉತ್ತರ ಒಳನಾಡಿನ ಬೆಳಗಾವಿ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ವಿಜಯಪುರ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
7/ 8
ಇಂದು ರಾಯಚೂರಿನ ಸಿಂಧೂನೂರಿನ ಹೊಸಹಳ್ಳಿಯಲ್ಲಿ ಪ್ರಧಾನಿಗಳು ಭಾಗಿಯಾಗಬೇಕಿರುವ ಸಮಾವೇಶಕ್ಕೆ ಮಳೆಯ ಆತಂಕ ಎದುರಾಗಿದೆ.
8/ 8
ಹೊಸಹಳ್ಳಿಯಲ್ಲಿ ವೇದಿಕೆ ನಿರ್ಮಾಣವಾಗುತ್ತಿರುವ ಹಿನ್ನೆಲೆ ಸಮಾವೇಶಕ್ಕೆ ಅನುಮತಿ ನೀಡಲು ಪ್ರಧಾನಿಗಳ ಭದ್ರತಾ ತಂಡ ಹಿಂದೇಟು ಹಾಕ್ತಿದೆ ಎಂದು ತಿಳಿದು ಬಂದಿದೆ.
First published:
18