ಸ್ವಾತಂತ್ರ್ಯ ದಿನಾಚರಣೆ ಬಳಿಕ ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಆಗಸ್ಟ್ನಲ್ಲಿ ಹಲವು ವಿವಾದಗಳ ನಡುವೆ ಕಂದಾಯ ಇಲಾಖೆ ಶಾಂತಿಯುತವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತ್ತು.
2/ 8
ಜನವರಿ 26ರಂದು ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
3/ 8
ಕಂದಾಯ ಇಲಾಖೆ ಇದೇ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಿತ್ತು. ಇದೀಗ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಮನವಿ ಮಾಡಲಾಗಿದೆ.
4/ 8
ಸಂಘಟನೆಗಳ ಮನವಿ ಮೇರೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
5/ 8
ಆಗಸ್ಟ್ 15ರಂತೆ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಅನುಮತಿ ನೀಡುತ್ತಾ ಅನ್ನೋದನ್ನು ಕಾದು ನೋಡಬೇಕಿದೆ. ಜಿಲ್ಲಾಡಳಿತ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಆ ರೀತಿ ನಡೆದುಕೊಳ್ಳಲು ನಿರ್ಧರಿಸಿದೆ.
6/ 8
ಕಳೆದ ಬಾರಿ ಚಾಮರಾಜಪೇಟೆಯ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಮತ್ತು ಹಿಂದೂ ಸಂಘಟನೆಗಳ ನಡುವೆ ವಾಕ್ಸಮರವೇ ಏರ್ಪಟ್ಟಿತ್ತು.
7/ 8
ಇದರ ಜೊತೆಗೆ ಈದ್ಗಾ ಮೈದಾನ ಯಾರಿಗೆ ಸೇರಬೇಕು ಎಂಬುದರ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಈ ಸಂಬಂಧ ವಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾಗೊಳಿಸಿ, ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದು ಆದೇಶ ನೀಡಿತ್ತು
8/ 8
ಈದ್ಗಾ ಮೈದಾನ ತನಗೆ ಸೇರಬೇಕೆಂದು ಅರ್ಜಿ ಸಲ್ಲಿಸಿದ್ದ ವಕ್ಫ್ ಬೋರ್ಡ್ ಸರಿಯಾದ ದಾಖಲೆಗಳನ್ನು ಸಲ್ಲಿಸಲು ವಿಫಲವಾಗಿತ್ತು.