ನೆಚ್ಚಿನ ನಾಯಿಯ ಸಾವಿನ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಇಂದು ನಮ್ಮ ಮನೆಯ ಮುದ್ದಿನ ನಾಯಿ ಸನ್ನಿ ವಯೋಸಹಜದಿಂದ ಸಾವನ್ನಪ್ಪಿದ್ದು, ತೀವ್ರ ದುಃಖ ತರಿಸಿದೆ. ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.