ಹುಬ್ಬಳ್ಳಿ ಹೊಸ ದಾಖಲೆ ನಿರ್ಮಿಸಲು ಸಜ್ಜಾಗಿದೆ. ವಿಶ್ವದಲ್ಲೇ ಅತಿ ದೊಡ್ಡ ರೈಲ್ವೆ ಪ್ಲಾಟ್ಫಾರ್ಮ್ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. (ಸಾಂದರ್ಭಿಕ ಚಿತ್ರ)
2/ 8
2023ರ ಜನವರಿ ತಿಂಗಳಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯ ಅತಿ ಉದ್ದದ ರೈಲು ಪ್ಲಾಟ್ಫಾರ್ಮ್ ಅನಾವರಣ ಮಾಡಲಿದ್ದಾರೆ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಸದ್ಯ ಹುಬ್ಬಳ್ಳಿ ರೈಲು ನಿಲ್ದಾಣದ ಈಗಿನ ಪ್ಲಾಟ್ಫಾರ್ಮ್ 1 550 ಮೀಟರ್ ಉದ್ದವಿದೆ. ಈ ಪ್ಲಾಟ್ಫಾರ್ಮ್ ಅನ್ನು 1,400 ಮೀಟರ್ಗೆ ವಿಸ್ತರಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಅಲ್ಲದೇ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಅನ್ನು 10 ಮೀಟರ್ ಅಗಲಕ್ಕೆ ವಿಸ್ತರಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಸದ್ಯ 1366 ಮೀಟರ್ ಉದ್ದವಿರುವ ಉತ್ತರ ಪ್ರದೇಶದ ಗೋರಖ್ಪುರ ಅತಿ ಉದ್ದದ ರೈಲು ಪ್ಲಾಟ್ಫಾರ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ರೈಲು ಪ್ಲಾಟ್ಫಾರ್ಮ್ನ್ನು ಮೀರಿಸಲು ಹುಬ್ಬಳ್ಳಿ ಸಜ್ಜಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಜೊತೆಗೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಇದುವರೆಗೆ ಇದ್ದ 5 ರೈಲು ಪ್ಲಾಟ್ಫಾರ್ಮ್ಗಳನ್ನು 8ಕ್ಕೆ ಏರಿಕೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಜೊತೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸದ್ಯದಲ್ಲೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ. (ಸಾಂದರ್ಭಿಕ ಚಿತ್ರ)
8/ 8
ವಂದೇ ಭಾರತ್ ಎಕ್ಸ್ಪ್ರೆಸ್ ಸಹ ಶುರುವಾದಲ್ಲಿ ಉತ್ತರ ಕರ್ನಾಟಕದ ಜನತೆಗೆ ಇನ್ನಷ್ಟು ಅನುಕೂಲ ಆಗಲಿದೆ. (ಸಾಂದರ್ಭಿಕ ಚಿತ್ರ)