Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

Karnataka Rains: ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭಗೊಂಡಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ತುಂತುರು ಮಳೆಯಾಗಿದೆ.

First published:

  • 17

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಇದೀಗ ಮತ್ತೆ ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಕರ್ನಾಟಕ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ನಿರೀಕ್ಷೆಗಳಿವೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿಯಲ್ಲಿಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಕೊಡಗು, ರಾಮನಗರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಇಂದು ಬೆಂಗಳೂರಿನಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ನಿರ್ಮಾಣ ಆಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಬೆಂಗಳೂರು ನಗರದಲ್ಲಿಂದು ಮೋಡ ಕವಿದ ವಾತಾವರಣವಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಕೂಡ ಹೆಚ್ಚಾಗಿ ಇರುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಮಳೆಗೆ ದ್ರಾಕ್ಷಿ ಬೆಳೆ ನಾಶ

    ಬುಧವಾರ ರಾತ್ರಿ ಸುರಿದ ಮಳೆ ಬಾಗಲಕೋಟೆ ದ್ರಾಕ್ಷಿ ಬೆಳೆಗಾರರಿಗೆ ದೊಡ್ಡ ಹೊಡೆತವನ್ನು ನೀಡಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆ ಹಾನಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಲಕ್ಷಾಂತರ ರೂಪಾಯಿ ಖರ್ಚು ಮಾಡಿ ದ್ರಾಕ್ಷಿ ಬೆಳೆಯಲಾಗಿತ್ತು. ಅಕಾಲಿಕ ಮಳೆಯಿಂದ ಬೆಳೆ ಹಾನಿದ್ರೆ ಯಾವ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Summer Rain Alert: ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಮುಂದಿನ 48 ಗಂಟೆ ಈ ಭಾಗದಲ್ಲಿ ವರುಣನ ಅಬ್ಬರ!

    ಬುಧವಾರ ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಅರ್ಧ ಗಂಟೆಗೂ ಅಧಿಕ ಕಾಲ ಮಳೆರಾಯ ಅಬ್ಬರಿಸಿದ್ದಾನೆ. ಹಾವೇರಿಯಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES