Karnataka Weather: ಬೆಂಗಳೂರು ಇನ್ನೆರಡು ದಿನ ಕೂಲ್ ಕೂಲ್; ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೆ ರಾಜ್ಯದಲ್ಲಿ ಮಳೆ ಸಾಧ್ಯತೆ ಇದ್ದು, ಹಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೆ ರಾಜ್ಯದಲ್ಲಿ ಮಳೆ ಸಾಧ್ಯತೆ ಇದ್ದು, ಹಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಕಳೆದ ಕೆಲ ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ನಿರಂತರ ಮಳೆಯಾಗಿದ್ದು, ಇನ್ನೇನು ಮಳೆಯಿಂದ ಬಿಡುವು ಸಿಕ್ತು ಅಂತ ಅಂದುಕೊಳ್ಳುತ್ತಿರುವಾಗಲೇ ಮತ್ತೆ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
3/ 7
ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಿದೆ. ಮಳೆ ಸಾಧ್ಯತೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಕೂಲ್ ವೆದರ್ ಮುಂದುವರೆಯಲಿದೆ.
4/ 7
ಇಂದು ಮತ್ತು ನಾಳೆ ಬೆಂಗಳೂರು ನಗರ,ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಕೊನೆಯ 2 ದಿನ ಕೊಡಗು ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
5/ 7
ಬೆಂಗಳೂರು, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಹಗರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚೆರಿಕೆ ನೀಡಿದೆ.
6/ 7
ಮಳೆ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆಯಿಂದ ಒಳ್ಳೆಯದು. ಬೆಚ್ಚಗಿನ ನೀರು ಕುಡಿಯುವುದು, ಬಿಸಿ ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದು.
7/ 7
ಉಳಿದಂತೆ ತಣ್ಣಿಗಿನ ಪಾನೀಯಮ ಆಹಾರಗಳ ಸೇವಿನಿಂದ ದೂರವಿರಬೇಕು. ನೆಗಡಿ, ಕೆಮ್ಮು ಜ್ವರದ ಲಕ್ಷಣಗಳು ಇದ್ದರೆ ಅವರಿಂದ ದೂರ ಇರಬೇಕು. ಕೆಮ್ಮು ಅಥವಾ ಸೀನುವಾರ ಮುನ್ನೆಚ್ಚರಿಕೆ ವಹಿಸಿ ಕರವಸ್ತ್ರ ಬಳಸಲು ವೈದ್ಯರು ಸಲಹೆ ನೀಡಿದ್ದಾರೆ.