ಫೈನಾನ್ಸಿಯರ್ ಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ್ದಾರೆ. ಇವರು ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳಿಗೆ ಹಣಕಾಸು ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಕೆಲವು ಫೈನಾನ್ಸಿಯರ್ ಗಳು ಬೇನಾಮಿಗಳಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ನಿನ್ನೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆಯಲಾಗಿದೆ. 15 ಕೋಟಿಗೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ದಾಖಲೆಗಳು ಸಹ ಪತ್ತೆಯಾಗಿವೆ. ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, RMV ಬಡಾವಣೆ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್, ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ನಿನ್ನೆ ಮುಂಜಾನೆಯೇ ದಾಳಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸೋದರನ ಮನೆಯಲ್ಲಿ ಒಂದು ಕೋಟಿ ನಗದು ಹಣ ಸಿಕ್ಕಿತ್ತು.