ಇದೇ ವೇಳೆ ಮಾಜಿ ಸಚಿವ ಜೆಡಿಎಸ್ ನಾಯಕ ಬಿ ಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮೂಡಿಗೆರೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಿಂಗಯ್ಯ ಅವರು ಟಿಕೆಟ್ ಸಿಗದೆ ಅಸಮಾಧಾನಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೂಡಿಗೆರೆಯಲ್ಲಿ ಬಿಜೆಪಿಯಿಂದ ವಲಸೆ ಬಂದಿದ್ದ ಎಂ.ಪಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದಿದ್ದ ನಿಂಗಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.