Rain Update: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಳೆ ಮುಂದುವರಿದಿದೆ. ಇನ್ನೂ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವುದಾಗಿ (Rain) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಬೆಂಗಳೂರು, ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಗುಡುಗು ಹಾಗೂ ಸಿಡಿಲಿನ ಸಮೇತ ಮಳೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕಳೆದ ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2/ 7
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲ ಎಲ್ಲಾ ಜಿಲ್ಲೆಗಳಿಗೆ 5 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
3/ 7
ಉ.ಒಳನಾಡಿನಲ್ಲಿ ಇಂದು ಮತ್ತು ನಾಳೆ ಬಹುತೇಕ ಕಡೆ ಮಳೆಯಾಗಲಿದೆ. ಏಪ್ರಿಲ್ 18, 19 ರಂದು ಕೆಲ ಜಿಲ್ಲೆಗಳಿಗೆ ಮಾತ್ರ ಮಳೆಯಾಗುತ್ತೆ ಎಂದು ಹವಾಮಾನ ಇಲಾಖೆಯ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
4/ 7
ಚಾಮರಾಜನಗರ, ಬೆಂಗಳೂರು, ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ
5/ 7
ಕಳೆದ 24 ಗಂಟೆಯಲ್ಲಿ ಕರಾವಳಿ, ದ.ಒಳನಾಡು ಹಾಗೂ ಉ.ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಬೆಂಗಳೂರಿನ ಜಾಲಹಳ್ಳಿಯಲ್ಲಿ 8 ಸೆಂ.ಮೀ, ಹೆಸರಘಟ್ಟದಲ್ಲಿ 7 ಸೆಂ.ಮೀ ಮಳೆಯಾಗಿದೆ.ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಟ ಉಷ್ಣಾಂಶ ದಾಖಲಾಗಿತ್ತು.
6/ 7
ಬೆಂಗಳೂರಿನಲ್ಲಿ 4ನೇ ದಿನವೂ ಮಳೆರಾಯ ಅಬ್ಬರಿಸಿದ್ದಾನೆ. ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.
7/ 7
ಸುರಿದ ಮಳೆಗೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಜೆ ವೇಳೆಗೆ ಕೆಲಸ ಮುಗಿಸಿಕೊಂಡು ಮನೆ ಸೇರಬೇಕೆಂದುಕೊಂಡವರಿಗೆ ವಾಹನ ದಟ್ಟಣೆ ಎದುರಾಗಿದೆ. ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಹಲವೆಡೆ ಮಳೆಯಿಂದಾಗಿ ವಿದ್ಯುತ್ ಕಡಿತವಾಗಿದೆ.