ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವೈಎಸ್ವಿ ದತ್ತಾ, ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿರುವ ವಿಚಾರವನ್ನು ಹಂಚಿಕೊಂಡರು.
2/ 7
ಕಾಂಗ್ರೆಸ್ ಪಕ್ಷ ಸೇರುತ್ತಿರುವ ಬಗ್ಗೆ ಅಧಿಕೃತ ಘೋಷಣೆ ಬಳಿಕ ಜೆಡಿಎಸ್ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗಿನ ಒಡನಾಟವನ್ನು ಹಂಚಿಕೊಂಡರು.
3/ 7
ಮಾಜಿ ಪ್ರಧಾನಿ ದೇವೇಗೌಡರು ನನ್ನದ್ದು ತಂದೆ ಮಕ್ಕಳ ಸಂಬಂಧ. ಕಳೆದ 50 ವರ್ಷಗಳಿಂದ ಭಾವನಾತ್ಮಕ ಸಂಬಂಧ ಇದೆ. ನಾನೆಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತೆ ಎಂದರು.
4/ 7
ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಇದನ್ನು ದೇವೇಗೌಡರಿಗೆ ಹೇಳಲು ಮುಜುಗರವಾಗುತ್ತಿದ್ದು, ನನ್ನ ಪರಿಸ್ಥಿತಿಯನ್ನು ದೇವೇಗೌಡರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
5/ 7
ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದು ದೇವೇಗೌಡ್ರು ,ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರದ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ ಎಂದು ತಿಳಿಸಿದರು.
6/ 7
ಕಳೆದ ಕೆಲವು ದಿನಗಳಿಂದ ವೈಎಸ್ವಿ ದತ್ತಾ ಜೆಡಿಎಸ್ ತೊರೆಯುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದ್ರೆ ಗುರುವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
7/ 7
ಇನ್ನು ಶಾಸಕರಾದ ಶಿವಲಿಂಗೇಗೌಡರು ಸಹ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುತ್ತಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.