ಕಲಾಪ ಆರಂಭಕ್ಕೂ ಮುನ್ನ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರದ ಕಲಾಪದಲ್ಲಿ ಹತ್ತು ಹಲವು ಕಾನೂನು ರಚನೆ ಆಗಬೇಕು. ಎಲ್ಲರ ಅಭಿಪ್ರಾಯದೊಂದಿಗೆ ಒಳ್ಳೆಯ ಚರ್ಚೆ ಆಗಿ ಜನರ ಸಮಸ್ಯೆ ಗಳಿಗೆ ಪರಿಹಾರ ಕೊಡಬೇಕು. ನೆಲ - ಜಲ - ಭಾಷೆ ಎಲ್ಲ ವಿಷಯಗಳ ಬಗ್ಗೆಯೂ ಚರ್ಚೆ ಆಗಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಎಲ್ಲ ಮಹನೀಯರ ಫೋಟೋ ಹಾಕುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಸ್ಪೀಕರ್ ಜೊತೆ ಚರ್ಚೆ ಮಾಡ್ತೀನಿ ಎಂದು ಹೇಳಿದ್ದಾರೆ.