ಹಾವೇರಿಯ ಶಿಗ್ಗಾಂವಿ ಕ್ಷೇತ್ರ ಇವತ್ತು ರಂಗೇರಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಬೃಹತ್ ರ್ಯಾಲಿಯಲ್ಲಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೊಮ್ಮಾಯಿ ನಾಮಿನೇಷನ್ ಸಲ್ಲಿಸುವ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಸಾಥ್ ಕೊಟ್ಟಿದ್ದರು. ಸಮಾವೇಶದಲ್ಲಿ ಮಾತಾಡಿದ ಕಿಚ್ಚ ಸುದೀಪ್, ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ಕೊಡಿ ಅಂತ ಮನವಿ ಮಾಡಿದರು. ಅಲ್ಲದೇ ಮೋದಿ ಕೆಲಸಗಳನ್ನೂ ಹಾಡಿ ಹೊಗಳಿದ್ದಾರೆ.
ರಾಜ್ಯದಲ್ಲೇ ಕುತೂಹಲ ಮೂಡಿಸಿರುವ ಕ್ಷೇತ್ರ ವರುಣಾ. ಕೋಲಾರ ಬದಲು ವರುಣಾ ಒಂದರಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಿದ್ದಾರೆ. ಇವತ್ತು ಸಿದ್ದರಾಮಯ್ಯ ಕೂಡ ಭರ್ಜರಿ ರೋಡ್ ಶೋ ಮೂಲಕ ಬಂದು ನಂಜನಗೂಡಿನ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಮೊಮ್ಮಗ ಧವನ್ ರಾಕೇಶ್ ಕೂಡ ಸಾಥ್ ನೀಡಿದ್ದು ವಿಶೇಷವಾಗಿತ್ತು.