ಬೆಂಗಳೂರು: ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್, ಕಳೆದ ಕೆಲ ವರ್ಷಗಳಿಂದ ಸೂಕ್ತ ನಿರ್ವಹಣೆ ಇಲ್ಲದೆ ಮುಚ್ಚುವ ಹಂತಕ್ಕೆ ತಲುಪಿತ್ತು. ಕೆಲವು ಕಡೆ ಸಂಪೂರ್ಣ ಮುಚ್ಚಿಹೋಗಿದ್ದವು. ಇದೀಗ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ರೀ ಓಪನ್ಗೆ ಸಿದ್ಧತೆ ನಡೆದಿದೆ.