ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್ ನೀಡಿ ಸ್ವಾಭಿಮಾನದ ಮೇರೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಲ್ಲಿ ಸೋಲಾಗಿದೆ. ಈ ನಡುವೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಹೊಸ ಜವಾಬ್ದಾರಿ ನೀಡಿರುವ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
ಈ ನಡುವೆ ತಮ್ಮ ಸೋಲಿನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್ ಅವರು, ನಾನು ಆರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಆದರೆ ಯಾವತ್ತೂ ಹಣ ಹಂಚಿಕೆ ಮಾಡಲಿಲ್ಲ. ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಭಾರೀ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡೋದನ್ನು ನೋಡಿದೆ. ಕಾಂಗ್ರೆಸ್ಗೆ 130 ರಿಂದ 140 ಸೀಟು ಬರುತ್ತೆ ಅಂತ, ಒಂದು ವಾರದ ಹಿಂದೆಯೇ ಹೇಳಿದ್ದೆ ಎಂದು ಶೆಟ್ಟರ್ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಲಕ್ಷ್ಮಣ್ ಸವದಿ ಅವರು, ಬಿಜೆಪಿ ನಾವು ನಡೆದಿದ್ದೆಲ್ಲ ಸರಿ ಎನ್ನುವ ಭಾವನೆ ಇಟ್ಟುಕೊಂಡಿತ್ತು. ರಾಜ್ಯದ ಜನ ಅದಕ್ಕೆ ಮನ್ನಣೆ ನೀಡಿಲ್ಲ. ಶೆಟ್ಟರ್ ಅವರು ಸೋತಿದ್ದಾರೆ ಅವರಿಗೆ ಸ್ಥಾನಮಾನ ನೀಡುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದೆ. ನಾನು ಹೊಸದಾಗಿ ಪಕ್ಷಕ್ಕೆ ಬಂದಿದ್ದೇನೆ ಕೊಡಿ ಅಂತ ನಾನು ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)