ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು, ನಾಳೆ ಮಧ್ಯಾಹ್ನ 2 ರಿಂದ ರಾತ್ರಿ 7:30 ರವರೆಗೆ ಪರ್ಯಾಯ ರಸ್ತೆಗಳ ಬಳಕೆಗೆ ಮಾಡುವಂತೆ ಕೋರಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರು ನಗರದಲ್ಲಿನ ಕೆಲರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಪ್ರಮುಖವಾಗಿ ಓಲ್ಡ್ ಏರ್ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್ ಸನ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ, ಲಾಲ್ ಬಾಗ್ ಮುಖ್ಯ ರಸ್ತೆ, ಬಸನವಗುಡಿ 50 ಅಡಿ ಕೆನರಾ ಬ್ಯಾಂಕ್ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಸಂಚಾರಕ್ಕೆ ಮನವಿ ಮಾಡಿದ್ದಾರೆ.
ಸಿ.ಎಂ.ಟಿ.ಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು, ಗೊರಗುಂಟೆಪಾಳ್ಯ - ವೆಸ್ಟ್ ಆಫ್ ಕಾರ್ಡ್ ರಸ್ತೆ - ಎಂ.ಸಿ ಸರ್ಕಲ್ - ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು. ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು, ಉಲ್ಲಾಳ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್ ಹೆಮ್ಮಿಗೆಪುರ ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)