ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯ ನಡುವೆಯೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA- National Investigation Agency) ವಹಿಸಿತ್ತು. ತನಿಖೆಯ ಮುಂದುವರಿದ ಭಾಗವಾಗಿ ಎಸ್ಐಎ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಹದಿಮೂರಕ್ಕೂ ಮಿಕ್ಕಿದ ಆರೋಪಿಗಳನ್ನು ಬಂಧಿಸಿದ್ದರು.