ಕರ್ನಾಟಕ ಚುನಾವಣೆಯಲ್ಲಿ ಕಣಕ್ಕಿಳಿಯುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ನಾಯಕರ ಹೆಸರಿದ್ದು, ಇನ್ನು ಕೆಲವು ನಾಯಕರು ಟಿಕೆಟ್ನಿಂದ ವಂಚಿತರಾಗಿದ್ದಾರೆ. ಇದರಲ್ಲಿ ಸಾಗರ ಕ್ಷೇತ್ರದ ಕಾಗೋಡು ತಿಮ್ಮಪ್ಪ ಕೂಡಾ ಒಬ್ಬರು. ತಮಗಿಲ್ಲವೆಂದಾದರೂ ತಮ್ಮ ಮಗಳು ರಾಜನಂದಿನಿಗಾದರೂ ಟಿಕೆಟ್ ಸಿಗಬಹುದೆಂಬ ನಿರೀಕ್ಷೆ ಅವರಿಗಿತ್ತು. ಆದರೀಗ ಎಲ್ಲಾ ಲೆಕ್ಕಾಚಾರ ಉಲ್ಟಾ ಆಗಿದೆ. ಹೀಗಿರುವಾಗ ಇತ್ತ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ ಕಾಂಗ್ರೆಸ್ಗೆ ಬಂಡಾಯದ ಬಿಸಿ ಮುಟ್ಟಿದೆ.
ಕರ್ನಾಟಕ ರಾಜ್ಯ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಚುನಾವಣಾ ಆಯೋಗ ಎಲೆಕ್ಷನ್ ಘೋಷಿಸುವ ಸಂಬಂಧ ಮಹತ್ವದ ಸೂಚನೆ ಹೊರಡಿಸಿದ್ದು, ರಾಜ್ಯ ಆಯೋಗಕ್ಕೆ ಈ ವಿಚಾರವಾಗಿ ಸನ್ನದ್ಧವಾಗಿರುವಂತೆ ಸೂಚಿಸಿದೆ. ಯಾವುದೇ ಕ್ಷಣದಲ್ಲಾದರೂ ಚುನಾವಣೆ ಘೋಷಣೆಯಾಗುವ ಸೂಚನೆ ನೀಡಿದೆ.
2/ 8
ಹೀಗಿರುವಾಗ ಇತ್ತ ರಾಜ್ಯ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ 124 ಕ್ಷೇತ್ರಗಳಲ್ಲಿ ಕಣಕ್ಕಿಳಿಸಲಿರೋ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಸೇರಿ ಹಲವಾರು ಘಟಾನುಘಟಿಗಳ ಹೆಸರು ಇದರಲ್ಲಿ ನೀಡಲಾಗಿದೆ.
3/ 8
ಮೊದಲ ಪಟ್ಟಿಯಲ್ಲಿ ಹಲವು ನಾಯಕರು ಸ್ಥಾನ ಪಡೆದಿದ್ದಾರೆ. ಹೀಗಿದ್ದರೂ ನಿರೀಕ್ಷೆ ಇಟ್ಟುಕೊಂಡಿದ್ದ ಕೆಲ ನಾಯಕರಿಗೆ ನಿರಾಸೆಯಾಗಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
4/ 8
ಸದ್ಯ ಟಿಕೆಟ್ ಘೋಷಣೆ ಬೆನ್ನಲ್ಲೇ ಟಿಕೆಟ್ ಸಿಗದ ಆಕಾಂಕ್ಷಿಗಳಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾರಂಭಿಸಿದ್ದಾರೆ. ಇಂತಹ ನಾಯಕರ ಪಟ್ಟಿಯಲ್ಲಿ ಸಾಗರದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕೂಡಾ ಒಬ್ಬರು.
5/ 8
ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದಕ್ಕೆ ಕಾಗೋಡು ತಿಮ್ಮೊಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಖುದ್ದು ಖರ್ಗೆ ಹಾಗೂ ಸಿದ್ದರಾಮಯ್ಯ ಭೇಟಿಯಾಗಿದ್ದರೂ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಅಲ್ಲದೇ ತನಗೆ ಟಿಕೆಟ್ ಸಿಗದಿದ್ದರೂ ತನ್ನ ಮಗಳಿಗೆ ಟಿಕೆಟ್ ನೀಡುವಂತೆ ಕಾಗೋಡು ತಿಮ್ಮಪ್ಪ ಮನವಿ ಮಾಡಿಕೊಂಡಿದ್ದರು.
6/ 8
ಇಷ್ಟಾದರೂ ಇದೀಗ ಸಾಗರ ಕ್ಷೇತ್ರದಿಂದ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಸಿಕ್ಕಿದ್ದು, ಈ ವಿಚಾರವಾಗಿ ಕಾಗೋಡು ತಿಮ್ಮಪ್ಪ ಬಣದಿಂದ ಆಕ್ರೋಶ ವ್ಯಕ್ತವಾಗಿದೆ.
7/ 8
ಸದ್ಯ ಕಾಂಗ್ರೆಸ್ ಈ ನಿರ್ಧಾರದಿಂದ ಕಾಗೋಡು ಬಣ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಂಡಾಯ ಅಭ್ಯರ್ಥಿ ನಿಲ್ಲಿಸಲು ಪ್ಲಾನ್ ನಡೆಯುತ್ತಿದೆಯಾ ಎಂಬ ಅನುಮಾನ ಎದ್ದಿದೆ. ಇಂದು ಅಥವಾ ನಾಳೆ ಇಬ್ಬರು ಬಂಡಾಯ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
8/ 8
ಬೇಳೂರು ವಿರುದ್ಧ ಮಾಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀನಾ ಶ್ರೀನಿವಾಸ್ ಹಾಗೂ ಮಲ್ಲಿಕಾರ್ಜುನ ಹಕ್ರೆ ಇಬ್ಬರಲ್ಲಿ ಒಬ್ಬರಿಗೆ ಬಂಡಾಯ ಅಭ್ಯರ್ಥಿಯಾಗಿ ನಿಲ್ಲಿಸುವ ಸಾದ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಶಾಕ್ ನೀಡಲು ಪ್ಲಾನ್ ನಡೆದಿದೆ. ಸದ್ಯ ಈ ಎಲ್ಲಾ ಬೆಳವಣಿಗೆಗಳು ಬಿಜೆಪಿ ಅಭ್ಯರ್ಥಿಗೆ ವರವಾಗುವುದರಲ್ಲಿ ಅನುಮಾನವಿಲ್ಲ.