ರಾಜ್ಯದ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಕಾಲ ಧ್ಯಾನ ಮಾಡುವ ಮತ್ತು ನೈತಿಕ ಶಿಕ್ಷಣ ನೀಡಲು ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಧ್ಯಾನ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
ವಿದ್ಯಾರ್ಥಿಗಳಲ್ಲಿ ಬೌಧಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಗುರಿಗಳನ್ನು ಹುಟ್ಟುಹಾಕಲು ಹಾಗೂ ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉತ್ತಮ ನಾಗರೀಕನ್ನಾಗಿ ಮಾರ್ಪಾಡು ಮಾಡಲು ನೈತಿಕ ಶಿಕ್ಷಣ ಸಹಕಾರಿಯಾಗಿದೆ. ನೈತಿಕ ಶಿಕ್ಷಣವನ್ನು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)