ಸೂಕ್ತ ದಾಖಲೆ ಇಲ್ಲದೆ ತೆಗೆದಿಕೊಂಡಿ ಹೋಗುತ್ತಿದ್ದ 2.5 ಲಕ್ಷ ರೂಪಾಯಿ ಹಣವನ್ನು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಸೀಜ್ ಮಾಡಿದ್ದಾರೆ. ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಾಕಲು ಹಣ ತಂದಿದ್ದರು ಎನ್ನಲಾಗಿದೆ. ಆದರೆ ದಾಖಲೆ ಇಲ್ಲದ ಕಾರಣ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಲಾಗಿದೆ. 50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ಐಬಿ ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲಕ್ಷ ಐದು ಸಾವಿರ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲಾದಗಿ ಪೊಲೀಸರ ಕಾರ್ಯಾಚರಣೆ ನಡೆಸಿ ಮುಂತುಜರಾಹ್ಮದ ಫನಿಬಂಧ (28) ಎಂಬ ವ್ಯಕ್ತಿಯಿಂದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ನಿವಾಸಿ ಗೂಡ್ಸ್ ವಾಹನದಲ್ಲಿ ಹಣ ಸಾಗಿಸುತ್ತಿದ್ದರು.