Siddaramaiah: ಬಿಜೆಪಿ ಕೇಳ್ತಿರೋ ‘ಆ’ ಒಂದು ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡೋದು ಯಾವಾಗ?
Assembly Election: 2018ರ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಪ್ರಶ್ನೆಗೆ ಬಿಜೆಪಿ ಉತ್ತರ ಹುಡುಕುತ್ತಿದೆ.
ಈ ಬಾರಿ ಕೊನೆಯ ಚುನಾವಣೆ ಎಂದು ಹೇಳಿರುವ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಕ್ಷೇತ್ರ ಯಾವುದು ಅಂತ ಗೊತ್ತಾದ್ರೆ, ಅಭ್ಯರ್ಥಿ ಯಾರು ಆಗಬೇಕು ಎಂದು ನಿರ್ಧರಿಸಲು ಬಿಜೆಪಿಗೆ ಸಹಾಯ ಆಗಲಿದೆ. ಆದ್ರೆ ಸಿದ್ದರಾಮಯ್ಯ ಅವರು ಮಾತ್ರ ಕ್ಷೇತ್ರ ಯಾವುದು ಎಂಬುದರ ಗುಟ್ಟು ಬಿಟ್ಟು ಕೊಡ್ತಿಲ್ಲ.
2/ 7
ರಹಸ್ಯ ಕಾಪಾಡಿಕೊಂಡ ಸಿದ್ದರಾಮಯ್ಯ
ನವೆಂಬರ್ನಲ್ಲಿ ಚುನಾವಣಾ ಟಿಕೆಟ್ ಆಕಾಂಕ್ಷಿಗಳಿಗೆ ತಮ್ಮ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದರು. ಕೊನೆ ದಿನ ಅರ್ಜಿ ಸಲ್ಲಿಸಿದ್ದ ಸಿದ್ದರಾಮಯ್ಯನವರು ಕ್ಷೇತ್ರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಬರೆಯುವ ಮೂಲಕ ರಹಸ್ಯ ಕಾಪಾಡಿಕೊಂಡಿದ್ದರು.
3/ 7
ಬಿಜೆಪಿ ಪ್ರಶ್ನೆ
ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರು, ಸಿದ್ದರಾಮಯ್ಯನವರೇ ನಿಮ್ಮ ಕ್ಷೇತ್ರ ಯಾವುದು ಅಂತ ಕೇಳ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಆಪ್ತರೂ ಸಹ ಈ ಬಗ್ಗೆ ತಲೆಕೆಡಿಸಿಕೊಂಡಿದ್ದಾರಂತೆ,
4/ 7
ಬಾದಾಮಿ ಕ್ಷೇತ್ರದಿಂದ ಎಲೆಕ್ಷನ್ಗೆ ನಿಲ್ಲೋದು ಡೌಟು ಅಂತ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಮಾಡಲು ಸಿದ್ಧತೆಯಲ್ಲಿರುವಾಗಲೇ ಅಲ್ಲಿಯ ಕೆಲ ನಾಯಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಸಿದ್ದರಾಮಯ್ಯನವರು ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
5/ 7
ವರುಣಾದತ್ತ ಸಿದ್ದರಾಮಯ್ಯ?
ಇದೀಗ ಮತ್ತೆ ವರುಣಾ ಕ್ಷೇತ್ರದತ್ತ ಸಿದ್ದರಾಮಯ್ಯ ಮುಖ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆಯೇ ಪುತ್ರ, ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದಾರೆ.
6/ 7
ಈ ಹಿನ್ನೆಲೆ ವರುಣಾದಿದಂದಲೇ ಸ್ಪರ್ಧೆ ಮಾಡಿದ್ರೆ ಸೇಫ್ ಎಂಬ ಲೆಕ್ಕಾಚಾರಕ್ಕೆ ಸಿದ್ದರಾಮಯ್ಯ ಬಂದಿದ್ದಾರೆ ಎನ್ನಲಾಗಿದೆ.
7/ 7
2018ರ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಟ್ಟಿದ್ದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿ ಸೋಲು ಕಂಡು, ಬಾದಾಮಿ ಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿದ್ದರು.