Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಇನ್ನು ನಿನ್ನೆಯಷ್ಟೇ ಬಿಜೆಪಿ ತನ್ನ 189 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಈ ಬಾರಿ ಅನೇಕ ಬಗೆಯ ಬದಲಾವಣೆಗಳು ಕಂಡುಬಂದಿವೆ. ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಯ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಸದ್ಯ ಇಲ್ಲಿನ ಸುಳ್ಯ ಕ್ಷೇತ್ರದ ಶಾಸಕ ಅಂಗಾರ ಕೂಡಾ ಈಶ್ವರಪ್ಪ ಹಾದಿಯನ್ನೇ ಹಿಡಿದಿದ್ದಾರೆ.
ಹೌದು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಅಂಗಾರ ಈ ಬಾರಿಯೂ ಟಿಕೆಟ್ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು. ಆದರೀಗ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು ಭಾರೀ ನಿರಾಸೆಯುಂಟು ಮಾಡಿದೆ.
2/ 7
ಹೌದು ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಹೊಸ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಸುಳ್ಯದಿಂದ ಬಿಜೆಪಿ ಭಾಗೀರಥಿ ಮುರುಳ್ಯ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.
3/ 7
ಸದ್ಯ ಟಿಕೆಟ್ ಕೈತಪ್ಪಿರುವುದರಿಂದ ಬೇಸರಗೊಂಡಿರುವ ಎಸ್ ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಈಶ್ವರಪ್ಪ ಹಾದಿಯನ್ನೇ ಹಿಡಿದಿದ್ದಾರೆ.
4/ 7
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುಳ್ಯದ ಶಾಸಕ ಅಂಗಾರ ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದಿದ್ದಾರೆ.
5/ 7
ಅಲ್ಲದೇ ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು ಎಂದೂ ತಿಳಿಸಿದ್ದಾರೆ.
6/ 7
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಂಗಾರ ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
7/ 7
ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
First published:
17