PHOTOS: ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ; ಹುಬ್ಬಳ್ಳಿ, ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ತ

3 ತಿಂಗಳ ಹಿಂದೆ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದ ಕೃಷ್ಣಾ ನದಿಯ ತಟದ ಊರುಗಳಲ್ಲಿ ಪ್ರವಾಹ ಉಂಟಾಗಿತ್ತು. ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಭಾಗದಲ್ಲಿ ಜನರು ಜಮೀನು, ಮನೆ ಕಳೆದುಕೊಂಡಿದ್ದರು. ಪ್ರವಾಹ ಪೀಡಿತರಿಗೆ ಸರ್ಕಾರದಿಂದ ಸರಿಯಾದ ಸಮಯದಲ್ಲಿ ಪರಿಹಾರ ಸಿಗದೆ ಜನರು ಪರದಾಡಿದ್ದರು. ಇನ್ನೇನು ಪರಿಸ್ಥಿತಿ ಸುಧಾರಿಸುತ್ತಿದೆ ಎನ್ನುವಷ್ಟರಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಇದರಿಂದ ಜನರು ಮತ್ತಷ್ಟು ಆತಂಕಗೊಂಡಿದ್ದು, ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯ ಆರ್ಭಟದಿಂದ ಆದ ಹಾನಿಯನ್ನು ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.

First published: