ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
2/ 14
ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡೆಬಿಡದೆ ಒಂದೇ ಸಮನೆ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.
3/ 14
ಮೂಡಿಗೆರೆಯ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ.
4/ 14
ಧಾರಾಕಾರ ಮಳೆಗೆ ಕಾಫಿನಾಡಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ.
5/ 14
ನಿರಂತರ ಮಳೆಯಿಂದ ನದಿಗಳ ಹರಿವು ಸಹ ಹೆಚ್ಚಳವಾಗಿದೆ. ಭದ್ರಾ, ತುಂಗಾ, ಹೇಮಾವತಿ, ನದಿಗಳ ಹರಿವು ಹೆಚ್ಚಾಗಿದೆ.
6/ 14
ಇನ್ನು, ಭಾರೀ ಮಳೆಯಿಂದಾಗಿ ಮಲೆನಾಡಿನ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ.
7/ 14
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
8/ 14
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
9/ 14
ಮಲೆನಾಡಿನ ಸಾಗರ, ತೀರ್ಥಹಳ್ಳಿ, ಹೊಸನಗರ, ಸಿದ್ಧಾಪುರ, ಶಿರಸಿ ತಾಲೂಕುಗಳಲ್ಲಿ ಮೂರು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
10/ 14
ಧಾರಾಕಾರ ಮಳೆಯಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಹೆಚ್ಚಿದೆ.
11/ 14
ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ 13,173 ಕ್ಯೂಸೆಕ್ಸ್ ನೀರು ಹರಿದುಬಂದಿದೆ.
12/ 14
ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
13/ 14
ಭಾರೀ ಮಳೆಗೆ ಜಯಪುರದಿಂದ ಬಸರಿಕಟ್ಟೆಗೆ ಹೋಗುವ ರಸ್ತೆ ಮಾರ್ಗದಲ್ಲಿ ಮರ ಉರುಳಿ ಬಿದ್ದಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರಿಕಟ್ಟೆ.
14/ 14
ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.