ರಾಜ್ಯದ ಚಿಕ್ಕಮಗಳೂರು, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಮಹಾ ಮಳೆಗೆ ಇಂದು ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಲ್ಲಿ ಬೈಕ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಸಿಡಲಿಗೆ 16 ವರ್ಷದ ಬಲಿಯಾಗಿದ್ದಾನೆ. ಉಳಿದಂತೆ ಬೆಂಗಳೂರಿನಲ್ಲಿ ಮಳೆ ನೀರಿನಲ್ಲಿ ಮುಳುಗಿ ಯುವತಿ ಸಾವನ್ನಪ್ಪಿದ್ದಾಳೆ.
ಒಂದೇ ಒಂದು ನಿಮಿಷ ತಡವಾಗಿದ್ದರೆ ಮೃತ ವೇಣುಗೋಪಾಲ್ ಮನೆ ಸೇರಿಕೊಳ್ಳುತ್ತಿದ್ದರು. ಮೂಲತಃ ಉತ್ತರ ಕರ್ನಾಟಕ ಮೂಲದ ವೇಣುಗೋಪಾಲ್ ಮೂಡಿಗೆರೆಯಲ್ಲಿ ಮದುವೆಯಾಗಿ ಇಲ್ಲೇ ವಾಸವಿದ್ದರು. ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದಿ ಪರಿಣಾಮ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಣು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಲ್ದೂರು ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇನ್ನು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೆ ಯಾದಗಿರಿ ಜಿಲ್ಲೆಯಲ್ಲಿ ಜನರು ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಬಿಸಿಲಿನ ತಾಪ ತಪ್ಪಿಸಲು ಯಾದಗಿರಿ ನಗರಸಭೆ ರಸ್ತೆಗಳಲ್ಲಿ ನೀರು ಸಿಂಪಡಣೆ ಮಾಡುತ್ತಿದೆ. ಯಾದಗಿರಿ ನಗರದ ಪ್ರಮುಖ ರಸ್ತೆಗಳ ಮೇಲೆ ಇಂದು ನೀರು ಸಿಂಪಡಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಮಕ್ಕಳು, ವೃದ್ಧರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.