ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು ನಗರಕ್ಕೆ ರಾತ್ರಿಯಾಗುತ್ತಿದ್ದಂತೆ ವರುಣನ ಸಿಂಚನ ಆಗಿದೆ. ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಸಂಜೆ 7 ಬಳಿಕ ಮಳೆ ಆರಂಭವಾಗಿದ್ದು, ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ.
2/ 8
ರಾಜಧಾನಿಯ ಮೆಜೆಸ್ಟಿಕ್, ಟೌನ್ ಹಾಲ್, ಶಾಂತಿನಗರ, ಬಸವನಗುಡಿ, ಜಯನಗರ, ಬ್ಯಾಟರಾಯನಪುರ, ಯಲಹಂಕ, ಹೆಬ್ಬಾಳ, ಕೆಆರ್ ಮಾರ್ಕೆಟ್, ಗಿರಿನಗರ, ಸುತ್ತಮುತ್ತ ಮಳೆಯಾಗಿದೆ. ಮಳೆಯ ಪರಿಣಾಮ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಾಹನ ಸವಾರರು ಪರದಾಟ ನಡೆಸಿದರು.
3/ 8
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಬಿಸಿಲಿನ ಹಬೆ ಕಡಿಮೆಯಾಗಿ ತಂಪಾದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
4/ 8
ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಅನ್ವಯ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಉಳಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಾಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ನಿಗದಿಯಾಗಿದ್ದ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಕೂಡ ಮುಂದೂಡಲಾಗಿದೆ. ರೋಡ್ ಶೋ ರದ್ದಾದ ಹಿನ್ನಲೆ ಟ್ವೀಟ್ ನಲ್ಲಿ ಜನರಿಗೆ ಅಮಿತ್ ಶಾ ಕೃತಜ್ಞತೆ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ದೇವನಹಳ್ಳಿ ಜನತೆ ಜೊತೆಗಿರಲು ಆಗಲಿಲ್ಲ ಎಂದು ತಿಳಿಸಿದ್ದಾರೆ.
7/ 8
ದೊಡ್ಡಬಳ್ಳಾಪುರದಲ್ಲಿ ಗುಡುಗು ಸಹಿತ ಭಾರೀ ಮಳೆಗೆ ಸಿಡಿಲು ಬಡಿದು ಜೋಡೆತ್ತುಗಳು ಸಾವನ್ನಪ್ಪಿದ್ದು, ತಾಲೂಕಿನ ಕಂಟನಗುಂಟೆ ಗ್ರಾಮದ ರೈತ ಅಂಚೆ ರಂಗಯ್ಯ ಎಂಬವರಿಗೆ ಸುಮಾರು 70 ಸಾವಿರ ನಷ್ಟ ಎದುರಾಗಿದೆ. ಜೊತೆಯಲ್ಲಿ ಗಾಂಧಿನಗರದಲ್ಲಿ ತೆಂಗಿನ ಮರ ನೆಲಕ್ಕೆ ಉರುಳಿ ಬಿದ್ದಿದ್ದು, ಒಂದು ಮನೆಗೆ ಹಾನಿಯಾಗಿದೆ.
8/ 8
ಇನ್ನು, ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
First published:
18
Bengaluru Rains: ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ಮಳೆ; ಏಪ್ರಿಲ್ 25ರ ವರೆಗೂ ಮಳೆ ಮುನ್ಸೂಚನೆ