ರಿಕ್ಷಾದೊಳಗಿದ್ದ ದಂಪತಿಗಳು ಸಾವನ್ನಪ್ಪಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರ್ವದಿಂದ ಕಾಪು ಕಡೆ ಸಂಚರಿಸುತ್ತಿದ್ದ ರಿಕ್ಷಾ ಮೇಲೆ ಮರ ಉರುಳಿ ಬಿದ್ದಿದ್ದು, ಪೊಲೀಸರ ನೆರವಿನೊಂದಿಗೆ ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮೃತರ ವಿವರ ಸಂಗ್ರಹಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)