Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

ಜನರಿಗೆ ಮನೆಯಲ್ಲೇ ಉಳಿದುಕೊಳ್ಳಲು ತಜ್ಞರು ಸಲಹೆ ನೀಡಿದ್ದು, ಹೊರ ಪ್ರದೇಶದಲ್ಲಿರುವ ಸಂದರ್ಭದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

  • News18 Kannada
  • |
  •   | Bangalore [Bangalore], India
First published:

  • 17

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆಯನ್ನು ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಾಸ, ಟ್ರಾಫಿಕ್ ಸಮಸ್ಯೆ, ಮರಗಳು ಉರುಳಿ ಬೀಳುವ ಸಾಧ್ಯತೆ ಇದೇ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಅಲ್ಲದೆ, ಜನರಿಗೆ ಮನೆಯಲ್ಲೇ ಉಳಿದುಕೊಳ್ಳಲು ಸಲಹೆ ನೀಡಲಾಗಿದ್ದು, ಮನೆಯ ಬಾಗಿಲು, ಕಿಟಕಿ ಮುಚ್ಚಿಡುವಂತೆ ತಿಳಿಸಿದೆ. ಹೊರ ಪ್ರದೇಶದಲ್ಲಿರುವ ಸಂದರ್ಭದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಮಳೆಯಾಗುವ ಸಂದರ್ಭದಲ್ಲಿ ಗೋಡೆಗಳಿಗೆ ಒರಗಿಕೊಂಡು ನಿಲ್ಲುವುದು, ವಿದ್ಯುತ್ ಕಂಬಗಳನ್ನು ಮುಟ್ಟುವುದು ಮಾಡಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ಜಾಗೃತಿ ವಹಿಸುವಂತೆ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಇನ್ನು, ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾದ ಮಳೆ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸುರಿಯಿತು. ದಿಢೀರ್ ಜೋರು ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

    MORE
    GALLERIES

  • 77

    Rain Alert: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ! ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಹೈಅಲರ್ಟ್

    ಬೆಂಗಳೂರಿನ ವಿಧಾನಸೌಧ, ಮೆಜೆಸ್ಟಿಕ್, ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಶಾಂತಿನಗರ ಸುತ್ತಮುತ್ತ ಮಳೆಯಾಗಿದೆ. ಮಧ್ಯಾಹ್ನದ ವೇಳೆ ಮಳೆಯಾದ ಪರಿಣಾಮ ಬಿಸಿಲಿನಿಂದ ಬಳಲಿದ್ದ ಬೆಂಗಳೂರು ಕೂಲ್ ಕೂಲ್ ವಾತಾವರಣ ಕಂಡು ಬಂತು.

    MORE
    GALLERIES