KSRTC ಇ-ಬಸ್ಗಳಿಗೆ ನೀವೇ ಹೆಸರು ಸೂಚಿಸಿ; ಆಕರ್ಷಕ ಬ್ರಾಂಡಿಂಗ್ ಐಡಿಯಾ ಕೊಟ್ಟವರಿಗೆ 35 ಸಾವಿರ ಬಹುಮಾನ!
KSRTC ಸಾರಿಗೆ ಸಂಸ್ಥೆ ಹೊಸದಾಗಿ ಆರಂಭಿಸುತ್ತಿರುವ ಮಲ್ಟಿ ಆಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳಿಗೆ ಸಾರ್ವಜನಿಕರಿಂದ ಬ್ರಾಂಡ್ ನೇಮ್, ಟ್ಯಾಗ್ ಲೈನ್ ಹಾಗೂ ಗ್ರಾಫಿಕ್ಸ್ಗಳನ್ನು ಆಹ್ವಾನಿಸಿದೆ.
ಪ್ರತಿ ಮಾದರಿಯ ವಾಹನಗಳಿಗೆ ಸೂಚಿಸುವ ಟ್ಯಾಗ್ ಲೈನ್, ಬ್ರಾಂಡ್ ನೇಮ್ಗೆ ತಲಾ ₹ 10 ಸಾವಿ ನಗದು ಬಹುಮಾನ ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ₹ 25 ಸಾವಿರ ಬಹುಮಾನ ನೀಡಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. (ಸಾಂದರ್ಭಿಕ ಚಿತ್ರ)
2/ 8
ಡಿಸೆಂಬರ್ 5 ಐಡಿಯಾಗಳನ್ನು ಹಂಚಿಕೊಳ್ಳಲು ಕೊನೆಯ ದಿನಾಂಕವಾಗಿದೆ. ನಿಮ್ಮ ಬ್ರಾಂಡ್ ಐಡಿಯಾಗಳನ್ನು cpro@ksrtc.org ಇಮೇಲ್ ಗೆ ಅಥವಾ ನಿಗಮದ ಫೇಸ್ ಬುಕ್ ಅಥವಾ ಟ್ವಿಟರ್ ಖಾತೆಗೆ ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಮೈಸೂರಿಗೆ ಡಿ 15 ರಿಂದ ವಿದ್ಯುತ್ ಚಾಲಿತ ಎಲೆಕ್ಟ್ರಿಕ್ ಬಸ್ಗಳ ಸೇವೆ ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. (ಸಾಂದರ್ಭಿಕ ಚಿತ್ರ)
4/ 8
ಇದು ಕರ್ನಾಟಕದಲ್ಲಿ ಎರಡು ನಗರಗಳ ನಡುವೆ ಆರಂಭವಾಗಲಿರುವ ಮೊದಲ ಎಲೆಕ್ಟ್ರಿಕ್ ಬಸ್ ಮಾರ್ಗವಾಗಲಿದೆ. (ಸಾಂದರ್ಭಿಕ ಚಿತ್ರ)
5/ 8
ಬೆಂಗಳೂರಿನಿಂದ ಮೈಸೂರು ಒಂದೇ ಅಲ್ಲದೇ, ಮುಂದಿನ ದಿನಗಳಲ್ಲಿ ಬೆಂಗಳೂರು ನಗರದಿಂದ ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೂ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಒಟ್ಟಾರೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವವರು ಶೀಘ್ರದಲ್ಲೇ ಎಲೆಕ್ಟ್ರಿಕ್ ಬಸ್ ಸೇವೆಯನ್ನು ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಕರ್ನಾಟಕದ ವಿವಿಧ ಪ್ರವಾಸಿ ಸ್ಥಳಗಳಿಗೂ ಈ ಎಲೆಕ್ಟ್ರಿಕ್ ಬಸ್ಗಳು ಭವಿಷ್ಯದಲ್ಲಿ ಸಂಚರಿಸುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
8/ 8
ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ಮೈಸೂರು ಬಸ್ ನಿಲ್ದಾಣದಲ್ಲಿ ಬಸ್ ಚಾರ್ಜಿಂಗ್ ಯೂನಿಟ್ ಸ್ಥಾಪಿಸುವ ಪ್ರಕ್ರಿಯೆಯೂ ಈಗಾಗಲೇ ಆರಂಭವಾಗಿದೆ. (ಸಾಂದರ್ಭಿಕ ಚಿತ್ರ)